ಇಡ್ಕಿದು ಸೇವಾ ಸಹಕಾರಿ ಸಂಘ ನಿಯಮಿತ, ಇದರ ಆಶ್ರಯದಲ್ಲಿ ರೋಟರಿ ಕ್ಲಬ್ ಪುತ್ತೂರು ಸಿಟಿ ಇದರ ಸಹಭಾಗಿತ್ವದಲ್ಲಿ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಮಂಗಳೂರು ಇವರಿಂದ ಉಚಿತ ವೈದ್ಯಕೀಯ ಶಿಬಿರ ನಡೆಯಲಿದೆ.
ದಿನಾಂಕ: 3/9/2024 ಮಂಗಳವಾರ ಬೆಳಿಗ್ಗೆ ಗಂಟೆ 9 ರಿಂದ ಮದ್ಯಾಹ್ನ 12.30 ರ ತನಕ ಇಡ್ಕಿದು ಸೇವಾ ಸಹಕಾರಿ ಸಂಘದ ಶತಾಮೃತ ಆವರಣದಲ್ಲಿ ನಡೆಯಲಿದೆ.
ಶಿಬಿರದ ಉದ್ಘಾಟನೆ ಮತ್ತು ಸಭಾ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮವನ್ನು ಪುತ್ತೂರು ತಾಲೂಕು ಆರೋಗ್ಯಧಿಕಾರಿಗಳಾದ ಡಾ. ದೀಪಕ್ ರೈ ಉದ್ಘಾಟಿಸಲಿದ್ದಾರೆ. ಸಭಾಧ್ಯಕ್ಷತೆಯನ್ನು ಇಡ್ಕಿದು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಬಿ. ಸುಧಾಕರ್ ಶೆಟ್ಟಿ ವಹಿಸಲಿದ್ದಾರೆ. ಶ್ರೀಮತಿ ಮೋಹಿನಿ ಜಯಕರ, ರೊ! ಮಹಮ್ಮದ್ ಸಾಹೇಬ್, ಡಾ. ಕೀರ್ತನ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಉಪಸ್ಥಿತರಿರಲಿದ್ದಾರೆ.
0 ಕಾಮೆಂಟ್‌ಗಳು