ಶಿವಾಜಿನಗರದ ಸೇಂಟ್ ಮೇರಿ ಚರ್ಚ್‌ನಲ್ಲಿ ಶ್ರೀ ಆರೋಗ್ಯ ಮಾತೆಯ ವಾರ್ಷಿಕ ಮಹೋತ್ಸವವನ್ನು ಸೆಪ್ಟೆಂಬರ್ 8ರಂದು (08/09/2024) ನಡೆಸಲಾಗುತ್ತಿದೆ. ಈ ಕಾರಣದಿಂದಾಗಿ, ಆ ದಿನ ಶಿವಾಜಿನಗರ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.
ಈ ಉತ್ಸವದಲ್ಲಿ ಬೃಹತ್ ಮೆರವಣಿಗೆ, ವಿವಿಧ ಭಾಷೆಗಳಲ್ಲಿ ಪ್ರಾರ್ಥನೆಗಳು ನಡೆಯಲಿದ್ದು, ಉತ್ಸವದಲ್ಲಿ ಲಕ್ಷಾಂತರ ಜನ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ, ಮದ್ಯಪಾನದ ಅಮಲಿನಿಂದ ಉಂಟಾಗಬಹುದಾದ ಸಮಸ್ಯೆಗಳನ್ನು ತಡೆಯಲು, ಪೊಲೀಸ್ ಇಲಾಖೆ ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟ ನಿಷೇಧಿಸಲು ನಿರ್ಧರಿಸಿದೆ.
ಸೇಂಟ್ ಮೇರಿ ಚರ್ಚ್‌ನ ರಥೋತ್ಸವದ ಸಂದರ್ಭದಲ್ಲಿ, ಶಿವಾಜಿನಗರ, ಕಮರ್ಷಿಯಲ್ ಸ್ಟ್ರೀಟ್ ಮತ್ತು ಭಾರತೀನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಎಲ್ಲಾ ಬಾರ್‌ಗಳು, ಪಬ್‌ಗಳು, ವೈನ್ಸ್ ಶಾಪ್‌ಗಳು, ಮತ್ತು ಎಂಎಸ್‌ಐಎಲ್ ಮಳಿಗೆಗಳಲ್ಲಿ ಸೆಪ್ಟೆಂಬರ್ 8ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 11ರ ವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.
0 ಕಾಮೆಂಟ್‌ಗಳು