ಪುತ್ತೂರು ತಾಲೂಕು ಕಛೇರಿ ಚುಣಾವಣಾ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕನಕರಾಜು ನಿಧನ

 

ಪುತ್ತೂರು ತಾಲೂಕು ಕಛೇರಿಯಲ್ಲಿ ಚುಣಾವಣಾ ಶಾಖೆಯ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕನಕರಾಜು ಎಂಬವರು ಸೆ.25 ರಂದು ನಿಧನರಾಗಿದ್ದಾರೆ.

ನಿನ್ನೆ ರಾತ್ರಿ  11 ಗಂಟೆ ಸುಮಾರಿಗೆ ಎದೆ ನೋವು ಕಾಣಿಸಿಕೊಂಡಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು, ಆಸ್ಪತ್ರೆಗೆ ತಲುಪುವ ಮೊದಲೆ ಅವರು ಕೊನೆಯುರಿಸಿರೆಳೆಲಿದ್ದಾರೆಂದು ತಿಳಿದು ಬಂದಿದೆ.

ಮೂಲತಃ ಮೈಸೂರು ಜಿಲ್ಲೆಯ ನಿವಾಸಿಯಗಿರುವ ಕನಕರಾಜು ರವರು ಪ್ರಥಮ ದರ್ಜೆ ಸಹಾಯಕರಾಗಿ ಪುತ್ತೂರು ತಾಲೂಕು ಕಛೇರಿಯಲ್ಲಿ ಚುಣಾವಣಾ ಶಾಖೆಯ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು