ಭೀಕರ ರಸ್ತೆ ಅಪಘಾತದಲ್ಲಿ ಯುವಕ ಸಾವು!


ಸೆಪ್ಟೆಂಬರ್ 5ರಂದು ರಾಷ್ಟ್ರೀಯ ಹೆದ್ದಾರಿ ಮುಕ್ಕ ಜಂಕ್ಷನ್‌ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಪಣಂಬೂರು ಬಂದರ್‌ನಲ್ಲಿ ಉದ್ಯೋಗದಲ್ಲಿದ್ದ ಗಣೇಶ್ ದೇವಾಡಿಗ ಸಾವನ್ನಪ್ಪಿದ್ದಾರೆ. ಹಳೆಯಂಗಡಿ ಇಂದಿರಾನಗರ ನಿವಾಸಿಯಾದ ಗಣೇಶ್ ಬೆಳಗ್ಗೆ 7 ಗಂಟೆಯ ಸುಮಾರಿಗೆ ತಮ್ಮ ದ್ವಿಚಕ್ರ ವಾಹನದಲ್ಲಿ ಕೆಲಸಕ್ಕೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಮಾಹಿತಿಯ ಪ್ರಕಾರ, ಮುಕ್ಕ ಜಂಕ್ಷನ್‌ನಲ್ಲಿ ಬ್ಯಾರಿಕೆಟ್ ಬಳಿ ತಮ್ಮ ವಾಹನವನ್ನು ನಿಧಾನಗತಿಯಲ್ಲಿಟ್ಟಾಗ ಹಿಂದಿನಿಂದ ವೇಗವಾಗಿ ಬಂದ ವಾಹನ ಡಿಕ್ಕಿ ಹೊಡೆದು ಗಣೇಶ ಗಂಭೀರವಾಗಿ ಗಾಯಗೊಂಡರು. ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆಯಾದರೂ, ಅವರು ಅಷ್ಟರಲ್ಲಿಯೇ ಮೃತಪಟ್ಟಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಉತ್ತರ ಸಂಚಾರ ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ವಿಚಾರಣೆಯ ನಂತರ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು