ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ

 


ಮೂಡ ಹಗರಣದ ಕುರಿತು ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ನ್ಯಾಯಲಯ ಪೂರ್ಣಗೊಳಿಸಿದ ತೀರ್ಪನ್ನು ಕಾಯ್ದಿರಿಸಿದೆ‌.


ಸಿಎಂ ಸಿದ್ದರಾಮಯ್ಯ ಪರವಾಗಿ ಅಭಿಷೇಕ್ ಮನು ಸಿಂಘ್ವಿ, ಪ್ರೊ.ರವಿವರ್ಮ ಕುಮಾರ್, ಸರಕಾರದ ಪರ ಎ.ಜಿ.ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು‌.


ನ್ಯಾಯಲಯದಲ್ಲಿ ದೂರುದಾರ ಟಿ.ಜೆ.ಅಬ್ರಹಾಂ ಪರ ವಕೀಲ ರಂಗನಾಥ್ ರೆಡ್ಡಿ ಪ್ರತಿವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ಇಂದು ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಅರ್ಜಿ ವಿಚಾರಣೆ ಮುಕ್ತಾಯಗೊಳಿಸಿ, ತೀರ್ಪುನ್ನು ಕಾಯ್ದಿರಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು