ಸಿದ್ದರಾಮಯ್ಯ ಪತ್ನಿ ರವರ ಅಚ್ಚರಿ ನಿರ್ಧಾರ

 


ಸಿಎಂ ಸಿದ್ದರಾಮಯ್ಯನವರ ಮುಡಾ ಪ್ರಕರಣ ದಿನದಿಂದ ದಿನಕ್ಕೆ ವಿಚಿತ್ರ ತಿರುವುಗಳನ್ನು ತೆಗೆದುಕೊಳ್ಳುತ್ತಿದ್ದು, ಎರಡು ಪ್ರಮುಖ ಬೆಳವಣಿಗೆಗಳಿಗೆ ನಿನ್ನೆ (ಸೋಮವಾರ) ಸಾಕ್ಷಿಯಾಗಿದೆ. ಒಂದೆಡೆ ಜಾರಿ ನಿರ್ದೇಶನಾಲಯ ಸಿಎಂ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿದ್ದರೆ, ಇತ್ತ ಮುಖ್ಯಮಂತ್ರಿಗಳ ಪತ್ನಿ ಪಾರ್ವತಿಅಚ್ಚರಿಯ ನಿರ್ಧಾರ ತೆಗೆದುಕೊಂಡಿದ್ದಾರೆ.


ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಿಗೆ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ, ತಮಗೆ ಹಂಚಿಕೆ ಮಾಡಲಾದ ಎಲ್ಲಾ 14 ಸೈಟ್‌ಗಳನ್ನು ಹಿಂದಿರುಗಿಸಿದ್ದಾರೆ.


ಸೈಟ್ ಹಗರಣಗಳು ಸಿಎಂ ಗೆ ಉರುಳಾಗುತ್ತಿದ್ದಂತೆ ಅವರ ಪತ್ನಿ ಇದೀಗ ಈ ನಿರ್ಧಾರ ಕೈಗೊಂಡಿರುವುದು ಎಲ್ಲರೂ ಅಚ್ಚರಿ ಪಡುವಂತೆ ಮಾಡಿದೆ. ಮುಂದೆನಾಗಬಹುದು ಎಂಬುದನ್ನು ಕಾದು ನೋಡಬೇಕಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು