ರಾಜ್ಯದಲ್ಲಿ ಕಳೆದ ಎರಡು ವಾರಗಳಿಂದ ಸಾಗುತ್ತಿರುವ ಹಿಂಗಾರು ಮಳೆಯು ಮತ್ತಷ್ಟು ತೀವ್ರತೆ ಪಡೆದಿದ್ದು, ಮುಂದಿನ ಒಂದು ವಾರದವರೆಗೆ ಹಲವೆಡೆ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ವ್ಯಾಪಕ ಮಳೆಯಾಗುವ ಸಂಭವವಿದ್ದು, ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಈ ಜಿಲ್ಲೆಗಳಿಗೆ ಭಾನುವಾರವೂ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರಿನಂತಹ ನಗರಗಳು ಸೇರಿದಂತೆ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಮುಂದುವರಿದ ಮಳೆಯ ಸಾಧ್ಯತೆ ಇದೆ.
ಇದೊದಲು ಧಾರಾಕಾರ ಮಳೆ ಸುರಿದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ, ಮುಂದಿನ ದಿನಗಳಲ್ಲಿ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಮಳೆ ಮತ್ತಷ್ಟು ಹೆಚ್ಚಾಗುವ ಎಚ್ಚರಿಕೆ ನೀಡಲಾಗಿದೆ.
0 ಕಾಮೆಂಟ್‌ಗಳು