ನವೆಂಬರ್ 27ರಂದು ಬಹುನಿರೀಕ್ಷಿತ ‘ಮ್ಯಾಕ್ಸ್’ ಸಿನಿಮಾ ಬಗ್ಗೆ ಬಹು ಮುಖ್ಯವಾದ ಘೋಷಣೆ ಆಗಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ. ‘ವಿ. ಕ್ರಿಯೇಷನ್ಸ್’ ಮೂಲಕ ಕಾಲಿವುಡ್ನ ಖ್ಯಾತ ನಿರ್ಮಾಪಕ ಕಲೈಪುಲಿ ಎಸ್. ಧಾನು ಅವರು ‘ಮ್ಯಾಕ್ಸ್’ ಸಿನಿಮಾವನ್ನು ನಿರ್ಮಿಸಿದ್ದಾರೆ. ಈಗಾಗಲೇ ಚಿತ್ರದ ಟೈಟಲ್ ಟ್ಯಾಕ್ಸ್ ಸಖತ್ ಸದ್ದು ಮಾಡಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈಗಾಗಲೇ ಸಿನಿಮಾ ಬಿಡುಗಡೆ ಆಗಿರಬೇಕಿತ್ತು. ಆದರೆ ಕಾರಣಾಂತರಗಳಿಂದ ತಡವಾಗಿದೆ. ಈಗ ರಿಲೀಸ್ ಡೇಟ್ ಬಗ್ಗೆ ಮಾಹಿತಿ ಸಿಗಬಹುದು ಎಂದು ಕಿಚ್ಚ ಸುದೀಪ್ ಅವರ ಫ್ಯಾನ್ಸ್ ನಿರೀಕ್ಷಿಸಿದ್ದಾರೆ.
0 ಕಾಮೆಂಟ್‌ಗಳು