ಪುತ್ತೂರಿನಲ್ಲಿ ಡಿ. 2ರಿಂದ ರಸ್ತೆ ಮರುಡಾಮರೀಕರಣ ಕಾಮಗಾರಿಗಳು ಆರಂಭ



ಪುತ್ತೂರು: ಡಿಸೆಂಬರ್ 2, ಸೋಮವಾರದಿಂದ ಪುತ್ತೂರು ನಗರಸಭಾ ವ್ಯಾಪ್ತಿಯ ಎಲ್ಲಾ ಪ್ರಮುಖ ರಸ್ತೆಗಳಲ್ಲಿ ಮರುಡಾಮರೀಕರಣ ಹಾಗೂ ಪ್ಯಾಚ್ ವರ್ಕ್ ಕಾಮಗಾರಿಗಳು ಆರಂಭಗೊಳ್ಳಲಿವೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.  
ಈ ಯೋಜನೆಯು ಸಾರ್ವಜನಿಕರ ಅನುಕೂಲತೆ ಹೆಚ್ಚಿಸುವ ಹಾಗೂ ರಸ್ತೆ ಸಂಚಾರವನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗಿದೆ. ಪ್ರಾರಂಭದ ಹಂತದಲ್ಲಿ ನಗರ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ಕಾಮಗಾರಿ ನಡೆಯಲಿದ್ದು, ಪುತ್ತೂರಿನ ಬೆಳವಣಿಗೆಯಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.  

ಶಾಸಕರಿಂದ ದೊರೆತ ಮಾಹಿತಿಯ ಪ್ರಕಾರ, ಈ ಕಾಮಗಾರಿಗಳು ಸರಿಯಾಗಿ ಮುಗಿಯುವಂತೆ ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಸಹಕಾರ ನೀಡುವಂತೆ ಮನವಿ ಮಾಡಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು