ಉಡುಪಿ- ಹೆಬ್ರಿಯಲ್ಲಿ ನಕ್ಸಲ್​​ ಕಮಾಂಡರ್ ವಿಕ್ರಂ ಗೌಡ ಎನ್​​ಕೌಂಟರ್​

 


ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಬಂದಿದೆ. ಉಡುಪಿ ಜಿಲ್ಲೆಯ ಹೆಬ್ರಿ‌ ಸಮೀಪ ಪೊಲೀಸರು ಮತ್ತು ನಕ್ಸಲರ ನಡುವೆ ಗುಂಡಿನ ಕಾಳಗ ನಡೆದಿದ್ದು, ನಕ್ಸಲರ ಕಮಾಂಡರ್ ವಿಕ್ರಂ ಗೌಡ ಎನ್​​ಕೌಂಟರ್​​ ಆಗಿದ್ದಾನೆ. 


ಕೆಲವು ದಿನಗಳಿಂದ ಹೆಬ್ರಿ-ಕಾರ್ಕಳ ಪ್ರದೇಶಗಳಲ್ಲಿ ನಕ್ಸಲರ ಓಡಾಟ ಹೆಚ್ಚಾಗಿ ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕದ ಎಎನ್​ಎಫ್ ಕಾರ್ಯಾಚರಣೆಗೆ ಇಳಿದಿತ್ತು. ನಿನ್ನೆ ಮಧ್ಯರಾತ್ರಿ 5 ಮಂದಿ ನಕ್ಸಲರ ತಂಡವೊಂದು ಸೀತಂಬೈಲು ಸಮೀಪ ರೇಷನ್ ಸಂಗ್ರಹಕ್ಕೆ ಬಂದಾಗ ಕೂಂಬಿಂಗ್ ಪ್ರಾರಂಭವಾಗಿದೆ.


ಈ ವೇಳೆ ಕೂಂಬಿಂಗ್​​ನಲ್ಲಿ ಕಬ್ಬಿನಾಲೆ ಮೂಲದ ವಿಕ್ರಂ ಗೌಡ ಇದ್ದ ಎನ್ನಲಾಗುತ್ತಿದೆ, ಪೊಲೀಸರ ಗುಂಡಿನ ದಾಳಿಗೆ ಈತ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಬರಬೇಕಿದೆ. ಇನ್ನುಳಿದ ನಕ್ಸಲರಿಗಾಗಿ ತೀವ್ರ ಶೋಧಕಾರ್ಯ ನಡೆಸಲಾಗುತ್ತಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು