ಕಾಂಗ್ರೆಸ್ ಎಂದೂ ಬಡವರ ಪರ ಎಂಬುದು ಗ್ರಾಪಂ ಉಪ ಚುನಾವಣೆಯಲ್ಲಿ ಸಾಭೀತಾಗಿದೆ:ಬ್ಲಾಕ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ
ಪುತ್ತೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಕರ್ನಾಟಕದ ಜನತೆಗೆ ಕೊಟ್ಟ ಭರವಸೆಗಳನ್ನು ಈಡೇರಿಸಿದೆ, ಕೊಟ್ಟ ಮಾತಿನಂತೆನಡೆದುಕೊಳ್ಳುವ ಮೂಲಕ ಕಾಂಗ್ರೆಸ್ ಬಡವರ ಮನೆಯನ್ನು ಬೆಳಗಿಸಿದೆ ಇದೇ ಕಾರಣಕ್ಕೆ ಗ್ರಾಪಂ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿಭಾರಿಸಿದೆ ಎಂದು ಪುತ್ತೂರು ಬ್ಲಾಕ್‌ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣಪ್ರಸಾದ್ ಆಳ್ವ ತಿಳಿಸಿದ್ದಾರೆ.
ಗ್ರಾಪಂ ಉಪಚುನಾವಣೆಯಲ್ಲಿ ಮೂರು ಕ್ಷೇತ್ರದಲ್ಲೂ ಕಾಂಗ್ರೆಸ್ ಬೆಂಬಲಿತರ ಜಯವಾಗಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಅಶೋಕ್ ರೈ ಅವರ ಅಭಿವೃದ್ದಿ ಪರಚಿಂತನೆಗಳು, ಉದ್ಯೋಗ ಸೃಷ್ಟಿ, ಕುಡಿಯುವ ನೀರಿಗೆ ಹೆಚ್ಚುವರಿಅನುದಾನ, ಭೃಷ್ಟಾಚಾರಕ್ಕೆ ಕಡಿವಾಣ ಸೇರಿದಂತೆ ಕ್ಷೇತ್ರದ ಸಮಗ್ರ ಅಭಿವೃದ್ದಿ ಇಂದು ಗ್ರಾಮ ಮಟ್ಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಶಕ್ತಿ ತುಂಬಿದೆ. ಮುಂದಿನ ದಿನಗಳಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇನ್ನಷ್ಟು ಗಟ್ಟಿಯಾಗಿ ಪಕ್ಷವನ್ನುಶಕ್ತಿಗೊಳಿಸುವಲ್ಲಿ ಪಲಿತಾಂಶ ವರದಾನವಾಗಲಿದೆ ಎಂದು ಹೇಳಿದರು.
0 ಕಾಮೆಂಟ್‌ಗಳು