ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ನಾಳೆ ಧರ್ಮಸ್ಥಳಕ್ಕೆ


ಕೇಂದ್ರದ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ನಾಳೆ ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ. 

ನಾಳೆ ಶ್ರೀಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿನಿ ಸಭಾ ಭವನದಲ್ಲಿ ನಡೆಯಲಿರುವ ಸ್ವ- ಸಹಾಯ ಸಂಘಗಳ ಫಲಾನುಭವಿಗಳಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ ನಡೆಯಲಿದ್ದು ಈ ಕಾರ್ಯಕ್ರಮವನ್ನು ಸಚಿವೆ  ನಿರ್ಮಲ ಸೀತಾರಾಮನ್ ಉದ್ಘಾಟಿಸಲಿದ್ದಾರೆ. 

ಪರಮ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.  ವೇದಿಕಯಲ್ಲಿ ಶ್ರೀಮತಿ ಹೇಮಾವತಿ ವಿ. ಹೆಗ್ಗಡೆ, ದ.ಕ ಜಿಲ್ಲಾ ಸಂಸದರಾದ ಬೃಜೇಶ್ ಚೌಟ, ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜ ಹಾಗೂ ಗಣ್ಯಾತಿಗಣ್ಯರು ಉಪಸ್ಥಿತರಿರಲಿದ್ದಾರೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು