Max Release Date: ಡಿಸೆಂಬರ್ 25ಕ್ಕೆ ಬಿಡುಗಡೆ

Max Movie Update: ಕಿಚ್ಚ ಸುದೀಪ್ ಅಭಿನಯದ ‘ಮ್ಯಾಕ್ಸ್’ ಸಿನಿಮಾ ಬಗ್ಗೆ ನಿರ್ಮಾಪಕರು ಗುಡ್ ನ್ಯೂಸ್ ನೀಡಿದ್ದಾರೆ. ಡಿಸೆಂಬರ್ 25ಕ್ಕೆ ಈ ಸಿನಿಮಾ ಬಿಡುಗಡೆ ಆಗಲಿದೆ. ಈ ಸಿನಿಮಾಗಾಗಿ ಅಭಿಮಾನಿಗಳು ಹಲವು ತಿಂಗಳಿನಿಂದ ಕಾಯುತ್ತಿದ್ದಾರೆ. ಅದ್ದೂರಿ ಬಜೆಟ್ನಲ್ಲಿ ಈ ಚಿತ್ರ ನಿರ್ಮಾಣ ಆಗಿದೆ. ಸುದೀಪ್ ಅವರು ‘ಮ್ಯಾಕ್ಸ್’ ಸಿನಿಮಾದಲ್ಲಿ ತುಂಬ ಮಾಸ್ ಆಗಿ ಕಾಣಿಸಿಕೊಂಡಿದ್ದಾರೆ.
ಧಾನು ನಿರ್ಮಾಣ ಮಾಡಿರುವ ‘ಮ್ಯಾಕ್ಸ್’ ಸಿನಿಮಾಗೆ ವಿಜಯ್ ಕಾರ್ತಿಕೇಯ ಅವರು ಆ್ಯಕ್ಷನ್-ಕಟ್ ಹೇಳಿದ್ದಾರೆ. ಕಿಚ್ಚ ಸುದೀಪ್ ಮುಖ್ಯ ಭೂಮಿಕೆ ನಿಭಾಯಿಸಿರುವ ಈ ಸಿನಿಮಾ ತಂಡದಿಂದ ಒಂದು ಅಪ್ಡೇಟ್ ಸಿಕ್ಕಿದೆ. ‘ಸರೆಗಮ ಕನ್ನಡ’ ಯೂಟ್ಯೂಬ್ನಲ್ಲಿ ಟೀಸರ್ ಬಿಡುಗಡೆ ಮಾಡುವ ಮೂಲಕ ರಿಲೀಸ್ ಡೇಟ್ ಬಗ್ಗೆ ಅಪ್ಡೇಟ್ ನೀಡಲಾಗಿದೆ. ನವೆಂಬರ್ 27ರಂದು ‘ಮ್ಯಾಕ್ಸ್’ ಸಿನಿಮಾ ಬಗ್ಗೆ ದೊಡ್ಡ ಅನೌನ್ಸ್ಮೆಂಟ್ ಆಗಲಿದೆ ಎಂದು ನಿರ್ಮಾಪಕರು ಇತ್ತೀಚೆಗೆ ತಿಳಿಸಿದ್ದರು. ಅದರಂತೆ, ಇಂದು ಬಿಡುಗಡೆ ದಿನಾಂಕದ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ. ಡಿಸೆಂಬರ್ 25ರಂದು ವಿಶ್ವಾದ್ಯಂತ ‘ಮ್ಯಾಕ್ಸ್’ ಸಿನಿಮಾ ರಿಲೀಸ್ ಆಗಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು