ಆತ್ಮಹತ್ಯೆಗೆ ಶರಣಾದ ಬ್ರಹ್ಮಗಂಟು ಖ್ಯಾತಿಯ ಶೋಭಿತಾ ಶಿವಣ್ಣ

 


ಕನ್ನಡ ಚಿತ್ರರಂಗದ ಮತ್ತೊಬ್ಬ ನಟಿ ಶೋಭಿತಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಿರುತೆರೆ ಹಾಗೂ ಹಲವು ಸಿನಿಮಾಗಳಲ್ಲಿ ನಟಿಸಿದ್ದ ನಟಿ ಶೋಭಿತಾ ಶಿವಣ್ಣ ಹೈದರಾಬಾದ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಎರಡೊಂದ್ಲಾ ಮೂರು, ಎಟಿಎಮ್ , ಒಂದ್ ‌ಕಥೆ ಹೇಳ್ಲಾ, ಜಾಕ್ ಪಾಟ್, ಅಪಾರ್ಟ್‌ಮಂಟ್‌ ಟು ಮರ್ಡರ್, ವಂದನಾ ಸಿನಿಮಾದಲ್ಲಿ ಅವರು ನಟಿಸಿದ್ದರು. ಇನ್ನು ಕಿರುತೆರೆಯಲ್ಲಿ ಬ್ರಹ್ಮಗಂಟು ಹಾಗೂ ನಿನ್ನಿಂದಲೇ ಧಾರಾವಾಹಿಯಲ್ಲಿ ಸಹ ನಟಿಸಿ ಅಭಿಮಾನಿಗಳ ಪಾಲಿಗೆ ಮತ್ತಷ್ಟು ಹತ್ತಿರವಾಗಿದ್ದರು. ಇದೀಗ ತೆಲುಗು ಚಿತ್ರರಂಗದಲ್ಲಿ ನಟಿಸುತ್ತಾ ನೆಲೆಸಿದ್ದರು. ಕಳೆದ ವರ್ಷ ಮದುವೆ ಮಾಡಿಕೊಂಡಿದ್ದ ಶೋಭಿತಾ ಶಿವಣ್ಣ ಅವರು ಬಾರದ ಲೋಕಕ್ಕೆ ಪಯಣಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು