ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಇನ್ನಿಲ್ಲ

 


ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಇನ್ನಿಲ್ಲ.


ಅವರು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು ಡಿ.10 ನಸುಕಿನ ಜಾವ 2:30ರ ಸುಮಾರಿಗೆ ನಿಧನರಾಗಿದ್ದಾರೆ. 92 ವರ್ಷ ವಯಸ್ಸಿ  ಎಸ್ ಎಂ ಕೃಷ್ಣ ರವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು, ಅವರನ್ನು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.


ಕರ್ನಾಟಕದ ಹತ್ತನೇ ಮುಖ್ಯಮಂತ್ರಿಯಾಗಿ, ದೇಶದ ವಿದೇಶಾಂಗ ಸಚಿವರಾಗಿ, ಮಾಹಾರಷ್ಟ್ರದ ರಾಜ್ಯಪಾಲರಾಗಿ ಮತ್ತು ಭಾರತದ ರಾಜಕಾರಣದಲ್ಲಿ ಇನ್ನೂ ಅನೇಕ ಜವಾಬ್ದಾರಿಗಳನ್ನು ವಹಿಸಿ ಛಾಪು ಮೂಡಿಸಿದ್ದ ಎಸ್​​ಎಂ ಕೃಷ್ಣ ಇನ್ನು ನೆನಪು ಮಾತ್ರ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು