ಕೊಡಗಿನ ವೀರಯೋಧ ದಿವಿನ್ ಚಿಕಿತ್ಸೆ ಫಲಿಸದೆ ನಿಧನ

 


ಕೆಲ ದಿನಗಳ ಹಿಂದೆ ಜಮ್ಮು-ಕಾಶ್ಮೀರ ಪೂಂಚ್‌ನಲ್ಲಿ ಸೇನಾ ವಾಹನ ಪಲ್ಟಿಯಾದ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ಶ್ರೀನಗರದ ಉದಂಪುರ್ ಕಮಾಂಡೋ ಭಾನುವಾರ ರಾತ್ರಿ ಇಹಲೋಕ ತ್ಯಜಿಸಿದ್ದಾರೆ‌.


ಕೊಡಗಿನ  ಯೋಧ ದಿವಿನ್ (28) ಭಾನುವಾರ ರಾತ್ರಿ ಹುತಾತ್ಮರಾಗಿದ್ದಾರೆ.

ಸೋಮವಾರಪೇಟೆ ತಾಲೂಕಿನ ಆಲೂರು ಸಿದ್ದಾಪುರ ಗ್ರಾಮದ 28 ವರ್ಷ ಪ್ರಾಯದ ದಿವಿನ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದರು. 

ಶ್ರೀನಗರದ ಉದಂಪುರ್ ಕಮಾಂಡೋ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. 


ಶ್ವಾಸಕೋಶದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯೋಧ ದಿವಿನ್‌ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು