ನಾಳೆ ಕರ್ನಾಟಕ ವಿಧಾನ ಸಭೆ ಸ್ಪೀಕರ್ ಯು‌.ಟಿ ಖಾದರ್ ಬೆಳ್ಳಾರೆಗೆ

 


ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇಲ್ಲಿನ ವಸಂತ ಸಂಭ್ರಮ ಕಾರ್ಯಕ್ರಮಕ್ಕೆ ನಾಳೆ ಚಾಲನೆ ಸಿಗಲಿದ್ದು ಮೂರು ದಿನಗಳ ಕಾಲ ನಡೆಯಲಿರುವ ಅದ್ದೂರಿ ಕಾರ್ಯಕ್ರಮವನ್ನು ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರು ಸನ್ಮಾನ್ಯ ಶ್ರೀ ಯು.ಟಿ ಖಾದರ್ ನಾಳೆ ಜ. 3 ರಂದು ಉದ್ಘಾಟಿಸಲಿದ್ದಾರೆ.


ಶಾಲಾವರದಲ್ಲಿ ಈಗಾಗಲೆ ಎಲ್ಲಾ ತಯಾರಿಗಳು ಪೂರ್ಣಗೊಂಡಿದ್ದು ಮೂರು ದಿನಗಳ ಕಾರ್ಯಕ್ರಮಕ್ಕಾಗಿ ಬೃಹತ್ ವೇದಿಕೆ ಸಿದ್ದಗೊಂಡಿದೆ. ಶಾಲಾ ಮೈದಾನದಲ್ಲಿ ಸಾವಿರಕ್ಕೂ ಅಧಿಕ ಜನರಿಗೆ ಆಸಾನದ ವ್ಯವಸ್ಥೆ ಮಾಡಲಾಗಿದ್ದು, ಊರಿನ ವಿದ್ಯಾದೇಗುಲದ ವಸಂತ ಮಹೋತ್ಸವ ಕಾರ್ಯಕ್ರಮವೂ ಇಡೀ ಬೆಳ್ಳಾರೆಗೆ ಹಬ್ಬದ ವಾತಾವರಣದ ಕಲೆಕಟ್ಟಿದೆ.


ನಾಳೆ ಬೆಳಗ್ಗೆ 10.30 ಕ್ಕೆ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದ್ದು ವೇದಿಕೆಯಲ್ಲಿ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಸೇರಿದಂತೆ ಅನೇಕ ಗಣ್ಯರ ಉಪಸ್ಥಿತಿ ಇರಲಿವೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು