ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಸಾನಿಧ್ಯ ವನ್ನು ಉಪರಾಷ್ಟ್ರಪತಿ ಜಗದೀಪ್ ಧನ್ ಕರ್ ಉಧ್ಘಾಟುಸಿದರು.
ದೆಹಲಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ವಿಶೇಷ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳದ ಹೆಲಿಪ್ಯಾಡ್ ಗೆ ಬಂದಿಳಿದರು.
ಕಾರ್ಯಕ್ರಮ ಉಧ್ಘಾಟನೆಗೂ ಮೊದಲು ಅವರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ನಂತರ ಶ್ರೀ ಕ್ಷೇತ್ರದಲ್ಲಿ ಭಕ್ತರ ದರ್ಶನಕ್ಕಾಗಿ ಸುಲಲಿತ ಸರತಿ ಸಾಲು ನಿರ್ವಹಣೆಗಾಗಿ ನಿರ್ನಿಸಲಾದ 2, 75,000 ಚದರ ಅಡಿ ವಿಸ್ತೀರ್ಣದ ಮೆಗಾ ಕ್ಯೂ ಕಾಂಪ್ಲೆಕ್ಸ್ ಶ್ರೀ ಸಾನಿಧ್ಯ ವನ್ನು ಜ. 7 ರಂದು ಲೋಕರ್ಪಣೆಗೊಳಿಸಿದರು.
ಈ ಸಂದರ್ಭದಲ್ಲಿ ಧರ್ಮಾಧಿಕಾರಿಗಳಾ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆ, ಹರ್ಷೇಂದ್ರ ಹೆಗ್ಗಡೆ ಮತ್ತಿತರರು ಉಪಸ್ಥಿತರಿದ್ದರು.
0 ಕಾಮೆಂಟ್‌ಗಳು