ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ರಾಜಕೀಯ ನಿವೃತ್ತಿ..!

 


ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಕೆ ಹರೀಶ್ ಕುಮಾರ್ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂಬ ಸುದ್ದಿಯೊಂದು ತಿಳಿದುಬಂದಿದೆ.


ಇಂದು ಬೆಳಗ್ಗೆ ಮಂಗಳೂರು ನಗರದ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಅವರು ತನ್ನ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂಬ ಸುದ್ದಿ ಭಾರಿ ಸದ್ದು ಮಾಡುತ್ತಿದೆ.


ಸಭೆಯಲ್ಲಿ ಸೇರಿರುವ ಎಲ್ಲರಿಗೂ ಸಿಹಿಹಂಚಿ ನಂತರ ಅವರು ರಾಜಕೀಯ ಘೋಷಣೆ ಬಗ್ಗೆ ಮಾತನಾಡಿದ್ದಾರೆನ್ನಲಾಗುತ್ತಿದೆ. ಆದರೆ ಇದೆಲ್ಲವೂ ಗಾಳಿ ಸುದ್ದಿ ಎಂದು ಹೇಳಲಾಗುತ್ತಿದ್ದು, ರಾಜಕೀಯ ನಿವೃತ್ತಿಯ ಬಗ್ಗೆ ಅವರು ಯಾವುದೇ ಮಾತುಗಳನ್ನಾಡಿಲ್ಲ, ಮಾಡುವುದಕ್ಕೆ ಕೆಲಸವಿಲ್ಲದೆ ಈ ರೀತಿಯ ಸುಳ್ಳು  ಸುದ್ದಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಯಾರೊ ಬರೆದಿದ್ದಾರೆ ಎಂದು ಹರೀಶ್ ಕುಮಾರ್ ರವರ ಮೂಲಗಳಿಂದ C TV ಗೆ ಸ್ಪಷ್ಟೀಕರಿಸಿದ್ದಾರೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು