ಇನ್ನು ಪತ್ತೆಯಾಗಿಲ್ಲ ಪಿಯುಸಿ ವಿದ್ಯಾರ್ಥಿ ದಿಗಂತ್: 24 ಕಳೆದರೂ ಪೋಲಿಸರು ಪ್ರಕರಣ ಭೇದಿಸುವಲ್ಲಿ ನಿರ್ಲಕ್ಷ್ಯ...!

 


ಪರಂಗಿಪೇಟೆಯ ಕಿದೆಬೆಟ್ಟು ನಿವಾಸಿ ಪಿಯುಸಿ ವಿಧ್ಯಾರ್ಥಿ ದಿಗಂತ್ ನಾಪತ್ತೆಯಾಗಿರುವ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ನಿರ್ಲಕ್ಷವಹಿಸುತ್ತಿದ್ದಾರೆ ಎಂದು ಆರೋಪಿಸಿ ಇಂದು ಸಾರ್ವಜನಿಕರು ಪೋಲೀಸ್ ಔಟ್ ಪೋಸ್ಟ್ ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.


ಫೆಬ್ರವರಿ 24 ರ ರಾತ್ರಿ  ಮನೆ ಪಕ್ಕದ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಮನೆಯಿಂದ ತೆರಳಿದ್ದ ಪರಂಗಿಪೇಟೆಯ ಕಿದೆಬೆಟ್ಟು ನಿವಾಸಿ ಪಿಯುಸಿ ವಿದ್ಯಾರ್ಥಿಯಾಗಿರುವ ದಿಗಂತ್, ಬಳಿಕ ನಾಪತ್ತೆಯಾಗಿದ್ದಾನೆ. ಈ ಬಗ್ಗೆ ಪೋಷಕರು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಸಿದ್ದಾರೆ. ಪ್ರಕರಣ ದಾಖಲಾಗಿ 24 ಗಂಟೆ ಕಳೆದರೂ ಪೊಲೀಸರು ಯಾವುದೇ ರೀತಿಯ ತನಿಖೆ ನಡೆಸುತ್ತಿಲ್ಲ ಎಂದು ಆರೋಪಿಸಿ ಇದೀಗ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ. 


ವಿಶ್ವ ಹಿಂದೂ ಪರಿಷತ್ ಜಿಲ್ಲಾ ಸಂಯೋಜಕ ಭರತ್ ಕುಮ್ಡೇಲ್ ನೇತ್ರತ್ವದಲ್ಲಿ ವಿಶ್ವಹಿಂದೂ ಪರಿಷತ್ ಪರಂಗಿಪೇಟೆ ಘಟಕದ ವತಿಯಿಂದ ಪರಂಗಿಪೇಟೆ ಹೊರಠಾಣೆಗೆ ಬೇಟಿ ನೀಡಿ ಮನವಿ ಮಾಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು