ಸುಳ್ಯದ ಖಾಸಾಗಿ ಡೆಂಟಲ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ: ನೇಣು ಬಿಗಿದ ಸ್ಥಿತಿಯಲ್ಲಿ ಮೃತ ದೇಹ ಪತ್ತೆ.

 


ಸುಳ್ಯ ಡೆಂಟಲ್ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ವಸತಿ ನಿಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ  ಫೆ. 26ರ ರಾತ್ರಿ ನಡೆದಿದೆ.


ಸುಳ್ಯದ ಖಾಸಗಿ ಡೆಂಟಲ್‌ ಕಾಲೇಜಿನ ಬಿ.ಡಿ.ಎಸ್‌. ವಿದ್ಯಾರ್ಥಿನಿ ಬೆಳಗಾವಿ ಮೂಲದ ಕೃತಿಕಾ ನಿಡೋಣಿ (21) ಮೃತ ವಿದ್ಯಾರ್ಥಿನಿಯಾಗಿದ್ದು. ಬುಧವಾರ ರಾತ್ರಿ  7.30ರ ಸುಮಾರಿಗೆ ವಸತಿ ನಿಲಯದ ತನ್ನ ಕೊಠಡಿಯೊಳಗೆ ನೇಣು ಬಿಗಿದುಕೊಂಡಿದ್ದ ಸ್ಥಿತಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ.


ದೂರವಾಣಿ ಕರೆ ಮಾಡಿ ತಾನು ಸಾಯುವುದನ್ನು ಯಾರೊಬ್ಬರಿಗೆ ತಿಳಿಸಿದ್ದಾಳೆಂದು ಹೇಳಲಾಗುತ್ತಿದೆ. ವೇಲ್‌ನಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಸುಳ್ಯ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಪ್ರಕರಣ ದಾಖಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು