ಪದೇ ಪದೇ ಶಿಸ್ತು ಉಲ್ಲಂಘಿಸಿದ ಆರೋಪದಲ್ಲಿ ವಿಜಯಪುರದ ಶಾಸಕ ಯತ್ನಾಳ್ ಅವರಿಗೆ ಇತ್ತೀಚೆಗೆ ಶೋಕಾಸ್ ನೋಟಿಸ್ ನೀಡಲಾಗಿತ್ತು.
ಶೋಕಾಸ್ ನೋಟಿಸ್ ಗೆ ಉತ್ತರಿಸಿದ್ದ ಯತ್ನಾಳ್, ಶಿಸ್ತು ಉಲ್ಲಂಘಿಸುವುದಿಲ್ಲ ಎಂದು ಭರವಸೆ ನೀಡಿದ್ದರು. ಆದರೆ ಅವರು ಪದೇ ಪದೇ ಶಿಸ್ತು ಉಲ್ಲಂಘಿಸಿದ್ದಾರೆ. ಆದ್ದರಿಂದ ಯತ್ನಾಳ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ 6 ವರ್ಷಗಳ ಅವಧಿಗೆ ಉಚ್ಚಾಟಿಸಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ಕೇಂದ್ರ ಶಿಸ್ತು ಸಮಿತಿಯ ಕಾರ್ಯದರ್ಶಿ ಓಂ ಪಾಠಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 ಕಾಮೆಂಟ್‌ಗಳು