ರಾಜ್ಯ ಬಜೆಟ್ : ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ಘೋಷಣೆ

ಪುತ್ತೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಜನತೆಯ ಹಲವು ವರ್ಷಗಳ ಕನಸು ಕೊನೆಗೂ ನನಸಾಗಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈ ಯವರು ಕೊಟ್ಟ ಮಾತಿನಂತೆ ಮೆಡಿಕಲ್ ಕಾಲೇಜನ್ನು ಪುತ್ತೂರಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್‌ ಮಂಡನೆಯಲ್ಲಿ ಪುತ್ತೂರಿಗೆ ಮೆಡಿಕಲ್‌ ಕಾಲೇಜು ಮಂಜೂರು ಮಾಡಿದ್ದಾರೆ. ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ 100 ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆಯನ್ನು ಉನ್ನತೀಕರಿಸಿ ಪ್ರಸಕ್ತ ವರ್ಷದಲ್ಲಿ ಕ್ರಮ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ತಿಳಿಸಿದ್ದಾರೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು