ನಿಗೂಡ ರೀತಿಯಲ್ಲಿ ನಾಪತ್ತೆಯಾದ ದಿಗಂತ್: ಪೋಲಿಸರಿಂದ ಕೂಬಿಂಗ್ ಕಾರ್ಯಚರಣೆ ಆರಂಭ

 


ಫೆ. 25 ರಂದು ನಿಗೂಢ ರೀತಿಯಲ್ಲಿ ನಾಪತ್ತೆಯಾದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಗಾಗಿ ಶೋಧ ಕಾರ್ಯ ಚರಣೆ ಮುಂದುವರಿದಿದೆ, ಇಂದು ಮಾ.8 ಶನಿವಾರ ಬೆಳಗ್ಗೆಯಿಂದಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ‌ಎನ್.ನೇತೃತ್ವದ ಜಿಲ್ಲಾ ಪೊಲೀಸ್ ತಂಡ ನಾಪತ್ತೆ ಘಟನೆ ನಡೆದ ಸ್ಥಳದ ಸುತ್ತಲಿನ ಸ್ಥಳ ಪ್ರದೇಶಗಳಲ್ಲಿ  ಕೂಂಬಿಂಗ್ ಕಾರ್ಯ ಆರಂಭವಾಗಿದೆ.


ಅಪ್ರಾಪ್ತ ಬಾಲಕ ದಿಗಂತ್ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ. ರೈಲ್ವೆ ಹಳಿಯಲ್ಲಿ ರಕ್ತದ ಕಲೆಯ ದಿಗಂತ್  ಚಪ್ಪಲಿ ಹಾಗೂ ಮೊಬೈಲ್ ಫೋನ್ ಸ್ಥಳದಲ್ಲಿ ಪತ್ತೆಯಾಗಿದ್ದು, ಬಳಿಕ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಕಳೆದ 12 ದಿನಗಳಿಂದ ದಿಗಂತ್ ನ ಪತ್ತೆಗಾಗಿ ಪೊಲೀಸರ ತಂಡ ವಿವಿಧ ರೀತಿಯ ಕಾರ್ಯಚರಣೆಗಳನ್ನು ನಡೆಸಿತ್ತು. ಆದರೆ ಹರಸಾಹಸ ಪಟ್ಟರೂ ಪೊಲೀಸರಿಗೆ ಈ ಪ್ರಕರಣ ಸವಾಲಾಗಿ ಪರಿಣಮಿಸಿದೆ. ಪ್ರಕರಣ ಇನ್ನೂ ಕೂಡ ಪತ್ತೆ ಮಾಡುವಲ್ಲಿ ಯಶಸ್ವಿಯಾಗದೆ ಇರುವ ಕಾರಣ ನ್ಯಾಯಲಯ ಪೋಲಿಸ್ ಇಲಾಖೆಗೆ  ಆದಷ್ಟು ಬೇಗ ಪತ್ತೆ ಹಚ್ಚುವಂತೆ ಎಚ್ಚರಿಕೆ ಸೂಚನೆ ನೀಡಿದೆ. ಹಾಗಾಗಿ ವಿವಿಧ ಆಯಾಮಗಳಲ್ಲಿ 40ಕ್ಕೂ ಅಧಿಕ ಪೊಲೀಸರ ತಂಡ ಕೆಲಸ ಮಾಡಿದೆಯಾದರೂ ದಿಗಂತ್ ಪತ್ತೆಯಾಗದ ಹಿನ್ನೆಲೆ ಇಂದು ಎಸ್.ಪಿ. ಹುಡುಕಾಟದ ಕಾರ್ಯ ಆರಂಭಿಸಿದೆ.


 ಬಂಟ್ವಾಳ ಸಬ್ ಡಿವಿಜನ್ ನ ಸುಮಾರು 9 ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಗಳು ಎಸ್.ಐ.ಗಳು ಹಾಗೂ ಸುಮಾರು 100ಕ್ಕೂ ಅಧಿಕ ಪೊಲೀಸರ ತಂಡ ಬೆಳಿಗ್ಗೆನಿಂದಲೇ ಕೂಂಬಿಂಗ್ ಕಾರ್ಯದಲ್ಲಿ ತೊಡಗಿಕೊಂಡಿದೆ.

ಡಿ‌ಎಆರ್ ತಂಡದ 30 ಪೊಲೀಸರು, ರೈಲ್ವೆ ಪೊಲೀಸ್, ಅಗ್ನಿಶಾಮಕ ದಳ, ಎಫ್.ಎಸ್.ಎಲ್. ತಂಡ, ಡಾಗ್ ಸ್ಕ್ವಾಡ್, ಡ್ರೋನ್ ಕ್ಯಾಮರಾಗಳನ್ನು ದಿಗಂತ್ ನಾಪತ್ತೆಯಾಗಿದ್ದ ಘಟನಾ ಸ್ಥಳದ ಸುತ್ತಮುತ್ತಲಿನ ಸುಮಾರು 5 ಕಿ.ಮೀ.ನ ಭಾಗದಲ್ಲಿ ಹುಡುಕಾಟ ಮಾಡಲು ಯೋಜನೆ ತಯಾರಿಸಿ ಕಾರ್ಯ ಆರಂಭಿಸಿದೆ. ನೇತ್ರಾವತಿ ನದಿ ಭಾಗದ ಸುತ್ತಲಿನ ಭಾಗದಲ್ಲಿ ದೋಣಿ ಬಳಸಿಕೊಂಡು ‌ನದಿಯಲ್ಲಿ ಕೂಡ ಹುಡುಕಲಾಗುತ್ತಿದೆ

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು